ಸಾರಾಯಿ, ಯುವಕರ ಭವಿಷ್ಯಕ್ಕೆ ಮತ್ತು ಬಡ ಕುಟುಂಬಗಳ ಏಳಿಗೆಗೆ ಮಾರಕ..!
ಕಲಬುರಗಿ: ಅಫಜಲಪೂರ ತಾಲೂಕಿನ ಹಲವು ಗ್ರಾಮಗಳಲ್ಲಿ ಪರವಾನಗಿ ಇಲ್ಲದೇನೆ ಮನೆಗಳಲ್ಲಿಯೇ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರ, ಅಂಗಡಿಗಳು, ಮಳಿಗೆಗಳು ಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವುದರಿಂದ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುವವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಮಂಜೂರಾತಿ ಇರುವುದು ಸಾಬಿತಾಗುತ್ತೆ.
